www.dgnsgreenworld.blogspot.com

Tuesday, March 4, 2025

*ಜೀವನಶೈಲಿಯನ್ನು ಸರಿಪಡಿಸಿಕೊಂಡರೆ ನವಗ್ರಹಗಳ ಅನುಗ್ರಹ ಪ್ರಾಪ್ತಿ ?*

*ಜೀವನಶೈಲಿಯನ್ನು ಸರಿಪಡಿಸಿಕೊಂಡರೆ ನವಗ್ರಹಗಳ ಅನುಗ್ರಹ ಪ್ರಾಪ್ತಿ  ?*

ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡಾಗ ದೈವಕೃಪೆ ತಾನಾಗಿಯೇ ಲಭಿಸುತ್ತದೆ. ಅದು ಹೇಗೆ ಎಂದು ನೋಡೋಣ.

*ರವಿಯ ಅನುಗ್ರಹ*  : ಬೆಳಗಿನ ಜಾವ ಬೇಗನೆ ಎದ್ದು ಮನೆಯನ್ನು ಶುಚಿರ್ಭೂತವನ್ನಾಗಿ ಮಾಡಿ ಸೂರ್ಯನಿಗೆ ನಮಸ್ಕಾರ ಮಾಡುವುದರಿಂದ ಸಾಕಷ್ಟು ಉತ್ತಮ ಪರಿಣಾಮಗಳು ಉಂಟಾಗುತ್ತದೆ. ಸೂರ್ಯನ ಕಿರಣದಲ್ಲಿರುವ 'ಡಿ' ಮತ್ತು 'ಇ' ಪ್ರೊಟೀನ್ ನಿಂದಾಗಿ ಚರ್ಮವು ಕಾಂತಿಯುತವಾಗುತ್ತದೆ. ದಿನವಿಡೀ ಮನಸ್ಸೂ ಉಲ್ಲಸಿತವಾಗಿರುತ್ತದೆ. 

*ಚಂದ್ರನ ಅನುಗ್ರಹ*  : ಚಂದ್ರನೆಂದರೆ ನೀರು. ಮನೆಯಲ್ಲಿ ಅಶೌಚ ಇರಬಾರದು. ಎಂಜಲು, ಮುಸುರೆ ಪಾತ್ರೆಗಳಿರಬಾರದು. ತಿಂದ ತಟ್ಟೆಗಳನ್ನು ಕೂಡಲೇ ತೊಳದಿಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಮನೆಯ ವಾತಾವರಣ ಶುಭ್ರವಾಗಿದ್ದರೆ ಮನಸ್ಸೂ ಶುಭ್ರವಾಗಿರುತ್ತದೆ.

*ಕುಜನ ಅನುಗ್ರಹ*  : ರಕ್ತಕ್ಕೆ ಅಧಿಪತಿ ಕುಜ. ಅನ್ನಾದಿ ಆಹಾರಗಳ ಸೇವನೆಯಿಂದ ರಕ್ತ ವೃದ್ಧಿಯಾಗುತ್ತದೆ. ಆ ಕಾರಣ 'ಅನ್ನಂ ಬ್ರಹ್ಮ' ಎಂಬ ವೇದವಾಕ್ಯವನ್ನು ಗೌರವಿಸಬೇಕು. ಆಹಾರ ಪದಾರ್ಥವನ್ನು ವೇಸ್ಟ್ ಮಾಡದಂತೆ ಜಾಗ್ರತೆ ವಹಿಸಬೇಕು. ನಿಯಮಿತವಾಗಿ ರಕ್ತ ದಾನವನ್ನು ಮಾಡಬೇಕು. ಅಶಕ್ತರಿಗೆ ಸಹಾಯ ಮಾಡಬೇಕು. 

*ಬುಧನ ಅನುಗ್ರಹ*  : ಬುಧ ಬುದ್ದಿಕಾರಕ. ಬುದ್ಧಿ ಹೀನನಾದರೆ ಮಾಡುವ ಕೆಲಸದಲ್ಲೂ ತೊಂದರೆ ಉಂಟಾಗುತ್ತದೆ. ಹಾಗಾಗಿ ಆಡುವ ಮಾತಿನಲ್ಲಿ, ಮಾಡುವ ಕೆಲಸದಲ್ಲಿ ವಿವೇಕವಿರಬೇಕು. 

*ಗುರುವಿನ ಅನುಗ್ರಹ*  : ಗುರು ಸಕಲ ದೋಷ ನಿವಾರಕ. ಮಾರ್ಗಸೂಚಕ. ನಮ್ಮಲ್ಲೊಂದು ಲೋಕೋಕ್ತಿಯಿದೆ. 'ಕೋಶ ಓದಬೇಕು ಲೋಕ ಸುತ್ತಬೇಕು' ಅಂತ. ಅರಿವೇ ಗುರು ಎನ್ನುವಂತೆ ಸುತ್ತಣ ಪರಿಸರವನ್ನು ನೋಡಿ ಕಲಿಯಬೇಕು. ಗಿಡ, ಮರಗಳಿಗೆ ನೀರೆಯುವ ಮೂಲಕ ಅವುಗಳನ್ನು ಪೋಷಿಸಬೇಕು. ಗುರು ಹಿರಿಯರಿಗೆ ಗೌರವ ಕೊಡುವುದು ಅತ್ಯಂತ ಮುಖ್ಯ.

*ಶುಕ್ರನ ಅನುಗ್ರಹ*  : ಶುಕ್ರನೆಂದರೆ ವೀರ್ಯ. ಪೌಷ್ಟಿಕದಾಯಕ ಆಹಾರ ಸೇವನೆಗೆ ಅಗತ್ಯವಾದ ಹಣ್ಣು, ತರಕಾರಿಗಳನ್ನು ಮನೆಗೆ ತರಬೇಕು. ಕುಟುಂಬ ಸೌಖ್ಯಕ್ಕೆ ಅಗತ್ಯವಾದ ಕಾರ್ಯಗಳನ್ನು ಮಾಡಬೇಕು. 

*ಶನಿಯ ಅನುಗ್ರಹ* : ಶನಿ ಕರ್ಮಾಧಿಪತಿ. ಕರ್ಮಸೂಚಕವಾದ ಪಾದರಕ್ಷೆಗಳನ್ನು ಮನೆಯಾಚೆಯೇ ಬಿಡಬೇಕು. ಮನೆಯನ್ನು ಶುಭ್ರವಾಗಿಟ್ಟುಕೊಳ್ಳಬೇಕು. 

*ರಾಹುವಿನ ಅನುಗ್ರಹ*  : ಹೊರಗಿನ ಪಾಪ ಮನೆಯೊಳಗೆ ಎನ್ನುವ ಮಾತಿನಂತೆ ಹೊರಗಿನಿಂದ ಮನೆಯೊಳಗೆ ಪ್ರವೇಶಿಸಿದ ಕೂಡಲೇ ಕೈಕಾಲುಗಳನ್ನು ತೊಳೆದುಕೊಳ್ಳಿ. ಮೂತ್ರ ಅಥವಾ ಮಲ ವಿಸರ್ಜನೆಯ ನಂತರ ಶುದ್ಧಾಚಮನ ಮಾಡಿ. ಕೈಕಾಲುಗಳನ್ನು ತೊಳೆಯಿರಿ. 

*ಕೇತುವಿನ ಅನುಗ್ರಹ*  : ಅತಿಥಿ ದೇವೋ ಭವ ಎನ್ನುವುದು ಶಾಸ್ತ್ರೋಕ್ತಿ. ಮನೆಗೆ ಬಂದ ಅತಿಥಿಗಳನ್ನು ಗೌರವಿಸುವುದರಿಂದ ಉತ್ತಮ ಫಲಗಳನ್ನು ಕಾಣಬಹುದು.
ವಂದನೆಗಳೊಂದಿಗೆ

No comments:

Post a Comment

welcome to dgnsgreenworld Family

29 ವರ್ಷದ ದೃಷ್ಟಿಹೀನ ಮಹಿಳೆ ಜಗತ್ತಿನ ಎತ್ತರದ ಶಿಖರವಾಗಿರುವ ಮೌಂಟ್ ಎವರೆಸ್ಟ್ ಏರುವ ಮೂಲಕ ಇತಿಹಾಸ ಬರೆದಿದ್ದಾರೆ .

29 ವರ್ಷದ ದೃಷ್ಟಿಹೀನ ಮಹಿಳೆ ಜಗತ್ತಿನ ಎತ್ತರದ ಶಿಖರವಾಗಿರುವ ಮೌಂಟ್ ಎವರೆಸ್ಟ್ ಏರುವ ಮೂಲಕ ಇತಿಹಾಸ ಬರೆದಿದ್ದಾರೆ .

Green World